- Advertisement -
ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ನಗರದ ಕಾರವಾರ ರಸ್ತೆಯ ಸೇತುವೆ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಪುಂಡಲೀಕ ಎಂಬ ಯುವಕ ಈ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಅಪರಿಚಿತ ವಾಹನವೊಂದು ಡಿಕ್ಕಿಯಾಗಿದೆ. ಪರಿಣಾಮ, ಬೈಕ್ ಸಮೇತ ಸವಾರ ರಸ್ತೆ ಪಕ್ಕಕ್ಕೆ ಹಾರಿ ಬಿದ್ದಿದ್ದಾನೆ. ಘಟನೆಯಲ್ಲಿ ಯುವಕನ ತಲೆಗೆ ಪೆಟ್ಟುಬಿದ್ದು ತೀವ್ರ ರಕ್ತ ಸ್ರಾವದಿಂದ ಆತ ಪ್ರಜ್ಞೆ ತಪ್ಪಿದ್ದ. ಇನ್ನು ಆತನನ್ನು ಆಸ್ಪತ್ರೆಗೆ ಕೆರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.
ಈ ಕುರಿತು ಹುಬ್ಬಳ್ಳಿನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪರಿಚಿತ ವಾಹನಕ್ಕಾಗಿ ಪೊಲೀಸರು ಶೋಧ ನಡೆಸಿದ್ದಾರೆ.
ಕರ್ನಾಟಕ ಟಿವಿ, ಹುಬ್ಬಳ್ಳಿ
- Advertisement -