ಯುವ ಶಕ್ತಿ ದೇಶದ ಭವಿಷ್ಯ – ಮಂಡ್ಯದಲ್ಲಿ ಸಿಇಒ ಸಂದೇಶ!

ಮಂಡ್ಯ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯನ್ನು ಅಂಗವಾಗಿ ಜಿಲ್ಲಾ ಮಟ್ಟದ ಪಾದಯಾತ್ರೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲ ಅತ್ಯಂತ ಮುಖ್ಯ, ಅದರಲ್ಲೂ ಯುವಜನತೆ ದೇಶದ ನಿಜವಾದ ಶಕ್ತಿ ಎಂದರು. ಯುವಕರು ಸನ್ಮಾರ್ಗದಲ್ಲಿ ನಡೆಯಿರಿ, ಸಕಾರಾತ್ಮಕ ಚಿಂತನೆಯೊಂದಿಗೆ ಸಮಾಜ ನಿರ್ಮಾಣಕ್ಕೆ ತೊಡಗಿದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಹೇಳಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ದೇಶದ ಏಕತೆಗಾಗಿ ಶ್ರಮಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಕೇವಲ ರಾಜಕಾರಣಿಯಲ್ಲ, ಸಮಾಜ ಸುಧಾರಕರೂ ಆಗಿದ್ದರು ಎಂದು ಸ್ಮರಿಸಿದರು. ಅವರ ದೇಶಾಭಿಮಾನ ಮತ್ತು ದೇಶಭಕ್ತಿ ಇಂದಿನ ಯುವ ಪೀಳಿಗೆಗೆ ಸ್ಫೂರ್ತಿದಾಯಕ ಮಾದರಿ ಎಂದು ಹೇಳಿದರು. ನಂದಿನಿ ಅವರು ವಿದ್ಯಾರ್ಥಿಗಳಿಗೆ — ಪಟೇಲ್ ಅವರ ಚಿಂತನೆ, ಆದರ್ಶಗಳ ಕುರಿತು ಲೇಖನ ಬರೆಯಿರಿ, ಜನರಲ್ಲಿ ಅರಿವು ಮೂಡಿಸಿ ಎಂದು ಕಿವಿಮಾತು ಹೇಳಿರು.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

About The Author