- Advertisement -
ಕಾಂಗ್ರೆಸ್‌ನಲ್ಲಿ ಸಮುದಾಯವಾರು ಡಿಸಿಎಂ ಹುದ್ದೆ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ಹೆಚ್ಚುವರಿಯಾಗಿ ಡಿಸಿಎಂ ನೇಮಕ ಕುರಿತಂತೆ ಸಾಮೂಹಿಕ ಚರ್ಚೆ ಆಗಬೇಕು. ಎಐಸಿಸಿ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗಬೇಕು. ಸಿಎಂ ಮಟ್ಟದಲ್ಲೂ ಚಿಂತನೆ ಆಗಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದು, ಹೊಸ ಡಿಸಿಎಂ ಸೃಷ್ಟಿ ಮಾಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರವಾಗಿದೆ. ನಾನು ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಕೂಡ ನಮ್ಮ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಪರಮೇಶ್ವರ್, ಸತೀಶ್ ಜಾರಕಿಹೊಳಿ ಹಾಗೂ ರಾಜಣ್ಣ ಅವರು ತಮ್ಮ ಹೇಳಿಕೆಗಳನ್ನು ಕೊಡ್ತಿದ್ದಾರೆ. ಅಂತಿಮವಾಗಿ ಈ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಜಮೀರ್ ಹೇಳಿದ್ದಾರೆ.
ಇನ್ನೂ, ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು, ಎಲ್ಲಾ ಸಚಿವರು ಡಿಸಿಎಂ ಆಗಲಿ ಎಂದು ಟಾಂಗ್ ನೀಡಿದ್ರು.
- Advertisement -