Sunday, October 26, 2025

Latest Posts

‘ಮುಖ್ಯಮಂತ್ರಿ ಯಾರಾಗಬೇಕು?’ ಅನ್ನೋ ಪ್ರಶ್ನೆಗೆ ಸ್ಪಷ್ಟನೆ ಕೊಟ್ಟ ಜಮೀರ್ ಖಾನ್!

- Advertisement -

ಬಿಹಾರದ ವಿಧಾನಸಭಾ ಚುನಾವಣೆಯ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿ ಎನ್ನುವ ಸುದ್ದಿಯ ನಡುವೆ, ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಪ್ರಶ್ನೆಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.

ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತದೆ. ಇದರಲ್ಲಿ ತಪ್ಪೇನಿದೆ? ಆದರೆ, ನಮ್ಮದು ಹೈಕಮಾಂಡ್ ಪಾರ್ಟಿ, ಅಲ್ಲಿ ಏನು ನಿರ್ಧಾರವಾಗುತ್ತೋ ಅದೇ ಅಂತಿಮ ಎಂದು ವಸತಿ ಸಚಿವರು ಹೇಳಿದ್ದಾರೆ. ಕೆಲವು ದಿನಗಳ ಹಿಂದೆ, ಶಾಸಕರ ಮಾತೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಮುಖ್ಯಮಂತ್ರಿ ಎನ್ನುವುದು ಎಲ್ಲರ ಕನಸು. ಆದರೆ, ಎಲ್ಲರೂ ಮುಖ್ಯಮಂತ್ರಿ ಆಗಲು ಸಾಧ್ಯವೇ? ಮುಖ್ಯಮಂತ್ರಿ ಇವರಾಗಬೇಕು ಎನ್ನುವ ನಮ್ಮ ಅಭಿಪ್ರಾಯವನ್ನು ತಿಳಿಸಬಹುದು. ಆದರೆ, ಅಂತಿಮ ನಿರ್ಧಾರ ತೆಗೆದುಕೊಳ್ಳುವುದು ಹೈಕಮಾಂಡ್. ನನ್ನ ಆಸೆ ಒಂದೇ, ಫುಲ್ ಐದು ವರ್ಷ, ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿ ಮುಂದುವರಿಯ ಬೇಕು ಎನ್ನುವುದು ಎಂದು ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಆರ್‌ಎಸ್‌ಎಸ್ ಕುರಿತು ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಲು ಜಮೀರ್ ಅಹ್ಮದ್ ಹಿಂದೇಟು ಹಾಕಿದ್ದಾರೆ. ಅವರು ಅವರ ಕೆಲಸ ಮಾಡುತ್ತಾರೆ, ನಾವು ನಮ್ಮ ಕೆಲಸ ಮಾಡುತ್ತೇವೆ ಎಂದರು. ಇನ್ನೊಂದೆಡೆ, ಖಾಸಗಿ ಸಂಸ್ಥೆಗಳ ಸಾರ್ವಜನಿಕ ಸ್ಥಳ ಬಳಕೆ ವಿರುದ್ಧದ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯ ರಾಜಕಾರಣಕ್ಕೆ ಬರುತ್ತಾರಾ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಜಮೀರ್ ಅಹ್ಮದ್ ಖಾನ್ ನೇರವಾದ ಉತ್ತರವನ್ನು ಕೊಡಲಿಲ್ಲ. ಬದಲಿಗೆ, ಸಿದ್ದರಾಮಯ್ಯನವರೇ ಪೂರ್ಣಾವಧಿಗೆ ಸಿಎಂ ಆದರೆ ಒಳ್ಳೆಯದು ಎನ್ನುವ ಆಶಯವನ್ನು ವ್ಯಕ್ತ ಪಡಿಸಿದ್ದಾರೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss