www.karnatakatv.net ಚಿಕ್ಕಬಳ್ಳಾಪುರ : ಡಿಸಿಸಿ ಬ್ಯಾಂಕ್ ಚಿಕ್ಕಬಳ್ಳಾಪುರ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಬ್ಯಾಂಕ್ ನಿ. ವತಿಯಿಂದ ಇಂದು ಆವಲಗುರ್ಕಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶೂನ್ಯ ಬಡ್ಡಿ ದರದಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ವಿತರಣೆ ಹಾಗೂ ರೈತರಿಗೆ ಬೆಳೆ ಸಾಲ ವಿತರಣೆ ಕಾರ್ಯಕ್ರಮವನ್ನು ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ರವರು ಉದ್ಘಾಟಿಸಿದ್ರು. ಇಂದಿನ ಕಾರ್ಯಕ್ರಮದಲ್ಲಿ ಆವಲಗುರ್ಕಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 25 ಸ್ತ್ರೀ ಶಕ್ತಿ ಸಂಘಗಳಿಗೆ ರೂ 90.68 ಲಕ್ಷ ಮೊತ್ತ ಹಾಗೂ 60 ಜನ ರೈತರಿಗೆ 70.0 ಲಕ್ಷ ಮೊತ್ತದ ಬೆಳೆ ಸಾಲವನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಸುಮಾರು 200 ಜನ ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಪಿಂಚಣಿ ಆದೇಶ ಪ್ರತಿಗಳನ್ನು ಸಚಿವ ಸುಧಾಕರ್ ವಿತರಿಸಿದ್ರು.
ನಂತರ ಮಾತನಾಡಿದ ಡಾ.ಕೆ.ಸುಧಾಕರ್ ಅವರು ರೈತರಿಗೆ ಶೂನ್ಯಬಡ್ಡಿ ದರದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ನೀಡುತ್ತಿರುವುದನ್ನು ಉಪಯೋಗ ಮಾಡಿಕೊಳ್ಳಬೇಕು ಇನ್ನೂ ಚಿಕ್ಕಬಳ್ಳಾಪುರಕ್ಕೆ ಹೆಚ್ ಎನ್ ವ್ಯಾಲಿ ನೀರು ಬಂದಿದ್ದು ಮೊದಲು ಕಂದವಾರ ಕೆರೆ ತುಂಬಿದೆ ಇನ್ನೂ ಈ ಕೆರೆಯಿಂದ ತಾಲೂಕಿನ ಹಲವು ಕೆರೆಗಳಿಗೆ ಬಿಡಲಾಗುತ್ತಿದೆ ಅಂತ ಹೆಳಿದ್ರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫೌಜಿ಼ಯಾ ತರನ್ನಮ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ತಾ.ಪಂ. ಅಧ್ಯಕ್ಷರಾದ ರಾಮಸ್ವಾಮಿ, ಕೋಚಿಮುಲ್ ಮಾಜಿ ಅಧ್ಯಕ್ಷರಾದ ಕೆ.ವಿ.ನಾಗರಾಜ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ದ್ಯಾವಣ್ಣ, ವೇದಾ ಸುದರ್ಶನರೆಡ್ಡಿ, ವಿಎಸ್ಎಸ್ಎನ್ ಅಧ್ಯಕ್ಷರಾದ ಜಯರಾಮರೆಡ್ಟಿ, ಎಪಿಎಂಸಿ ಅಧ್ಯಕ್ಷರಾದ ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪ, ಮುಖಂಡರಾದ ಮರಳಕುಂಟೆ ಕೃಷ್ಣಮೂರ್ತಿ, ರಾಜಣ್ಣ, ಕೃಷ್ಣಾರೆಡ್ಡಿ, ಚಂದ್ರಪ್ಪ, ಎಂ.ಎಫ್.ಸಿ ನಾರಾಯಣಸ್ವಾಮಿ, ಗೋವಿಂದಸ್ವಾಮಿ ಇನ್ನೂ ಮುಂತಾದವರು ಹಾಜರಿದ್ದರು.
ಕರ್ನಾಟಕ ಟಿವಿ, ಚಿಕ್ಕಬಳ್ಳಾಪುರ