ಜೀರೋ ಭಯೋತ್ಪಾದಕತೆ ಮೋದಿ ಸರ್ಕಾರದ ನಿರ್ಧಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಬೆಳಗಾವಿಯಲ್ಲಿ ನಡೆದಂತಹ ಘಟನೆ ನಾಗರೀಕ‌ ಸಮಾಜ‌ ತಲೆ ತಗ್ಗಿಸುವಂತ ಘಟನೆ ಎಂದಿದ್ದಾರೆ.

ರಾಜಸ್ಥಾನ ಕಾಂಗ್ರೆಸ್ ನಲ್ಲೂ ಸಹ ಇದೇ ಪರಿಸ್ಥಿತಿ‌ ಇತ್ತು. ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಇದೇ ರೀತಿ ಘಟನೆಗಳು ನಡಯುತ್ತಿವೆ. ಸರ್ಕಾರದ ಮೇಲೆ ತೀವ್ರ ಒತ್ತಡ ಹಾಕುವ ಕೆಲಸ ಬಿಜೆಪಿಯಿಂದಲೂ ಸಹ ನಡೆಯುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಸಂಸತ್ ನಲ್ಲಿ ಆಗಂತುಕರ ದಾಳಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ,  ಇದು ಕೇವಲ ತಿಳಿಗೇಡಿಗಳು ಮಾಡಿರುವಂತಹ ಘಟನೆಯಲ್ಲ. ಭಾರತದ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರಲು ಮಾಡಿರೋ ಘಟನೆ. ಇದರಲ್ಲಿ ರಾಜಕೀಯ ಮಾಡಬೇಕಿಲ್ಲ. ಈ ಹಿಂದೆ ಸಾಕಷ್ಟು ಪ್ರಕರಣಗಳು ನಡೆದಿವೆ. ಪಿಸ್ತೂಲ್ ಮತ್ತು ಡ್ರ್ಯಾಗರ್ ತೆಗೆದುಕೊಂಡು ಸಹ ಸಂಸತ್ತಿಗೆ ಎಂಟ್ರಿ ನೀಡಿದ್ದರು. ಒಂದೇ ವ್ಯಕ್ತಿ ಎರಡು ದಿನ ಒಂದೇ ಪಾಸ್ ನಲ್ಲಿ ಸಂಸತ್ತಿಗೆ ಪ್ರವೇಶ ಮಾಡಿದ್ದ. ಇದಕ್ಕೆ ಯಾವ ಎಂಪಿ ಪಾಸ್ ನೀಡಿದ್ದರು ಎಂಬುದು ಸಹ ಗೊತ್ತಿದೆ. ಆದರೆ ಇದನ್ನು ನಾವು ಮಾತನಾಡಲ್ಲ ಇದು ಮೋದಿ ಸರ್ಕಾರದಲ್ಲಿ ನಡೆಯಲ್ಲಾ. ಇದನ್ನು ರಾಜಕೀಯ ಮಾಡಬಹುದು, ಕಟುವಾಗಿ ಕಾಂಗ್ರೆಸ್ ಟೀಕಿಸಬಹುದು ಆದರೆ ನಾವು ಅದನ್ನು ಮಾಡಲ್ಲ. ಮುಂದೆ ಇಂತಹ ಘಟನೆ ನಡೆಯದಂತೆ ಕಠಿಣ ಕ್ರಮಕ್ಕೆ ಚಿಂತನೆ ನಡೆದಿದೆ. ಜೀರೋ ಭಯೋತ್ಪಾದಕತೆ ಮೋದಿ ಸರ್ಕಾರದ ನಿರ್ಧಾರ ಮಾಡಿದೆ. ಈ ಹಿಂದಿನ ಸ್ಪಿಕರ್ ತೆಗೆದುಕೊಂಡ ಕ್ರಮಕ್ಕಿಂತ ಈಗಿನ ಸ್ಪಿಕರ್ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ. ಈ ತರಹದ ವಿಷಯದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು ನಾವೆಲ್ಲರೂ ಒಟ್ಟಾಗಿ ಇದಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದರು.

ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿ ಬಿಜೆಪಿ ಶಾಸಕರು ಭಾಗಿಯಾದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, ನಾಳೆ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಈ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ. ಶಾಸಕರಿಗೆ ಏನಾದರೂ ವಿವರಣೆ ಕೇಳಬೇಕಾ ಅಥವಾ ಮುಂದೆ ಏನು ಮಾಡಬೇಕೆಂದು ತೀರ್ಮಾನ ಮಾಡುತ್ತೇವೆ. ಕಾಂಗ್ರೆಸ್ ಪರಿಸ್ಥಿತಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ ಅವರಲ್ಲೇ ಆಂತರಿಕ ಕಚ್ಚಾಟ ನಡೆದಿದೆ. ಈಗ ಇದ್ದವರಿಗೆ ಸಚಿವ ಸ್ಥಾನ ಕೊಡುವುದಕ್ಕೆ ಕಾಂಗ್ರೆಸ್ ನವರಿಗೆ ಆಗುವುದಿಲ್ಲ. ನನಗೆ ಮುಖ್ಯ ಮಂತ್ರಿ ಮಾಡಿಲ್ಲ, ನಿನಗೆ ಸಚಿವ ಮಾಡಿಲ್ಲ, ನಿಗಮ ಮಂಡಳಿ ಕೊಟ್ಟಿಲ್ಲ ಅಂತ ಜಗಳ ಶುರುವಾಗಿದೆ.

ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ಬಿದ್ದಿದೆ. ಸದ್ಯ ಮಾಧ್ಯಮಗಳು ನಡೆಸಿರುವ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ 20- 22 ಸೀಟ್ ಬಿಜೆಪಿ ಗೆಲುವಿನ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಸಿದ್ಧಾಂತ ಒಪ್ಪದ ಮಾಧ್ಯಮಗಳ ಸಮೀಕ್ಷೆಯಲ್ಲಿ ಬಿಜೆಪಿ ವಾಪಸು ಅಧಿಕಾರಕ್ಕೆ ಬರೋದೂ ಪಕ್ಕಾ ಆಗಿದೆ. ನಾವು 25 ಕ್ಷೇತ್ರ ಗೆದ್ದೇ ಗೆಲ್ಲುತ್ತೇವೆ. ಕೆಲವು ಸಂಧರ್ಭದಲ್ಲಿ ನಾವು ತೆಗೆದುಕೊಂಡ ನಿರ್ಧಾರದಿಂದ ಕರ್ನಾಟಕದಲ್ಲಿ ಸೋತ್ತಿದ್ದೇವೆ. ಆದರೆ ಈಗಾಗಲೇ ಕಾಂಗ್ರೆಸ್ ಡೌನ್ ಫಾಲ್ ಶುರುವಾಗಿದೆ. 136 ಶಾಸಕರುಗಳಿಗೆ ಸ್ಥಾನ ನೀಡಲು ಕಾಂಗ್ರೆಸ್ ಗೆ ಜಾಗನೂ ಇಲ್ಲ, ಸಮಯನೂ ಇಲ್ಲ, ಅವಧಾನ ಇಲ್ಲ. ಡಿಕೆ ಶಿವಕುಮಾರ್ ಸುಮ್ಮನೆ ಹೇಳುತ್ತಾರೆ ಕಾಂಗ್ರೆಸ್ ಗೆ ಬರುವವರನ್ನು ತೆಗೆದುಕೊಳ್ಳಲು ಅವರಿಗೂ ಆಗಲ್ಲ. ಬೇರೆಯವರನ್ನು ಪಕ್ಷಕ್ಕೆ ಕರೆದುಕೊಂಡ್ರೆ ನಾವು ಪಕ್ಷದಿಂದ ಹೊರ ಹೋಗುತ್ತೇವೆ ಅಂತ ಕಾಂಗ್ರೆಸ್ ಶಾಸಕರ ಹೇಳುತ್ತಿದ್ದಾರೆ. ಅವರು ಯಾರು ಅಂತ ನನಗೆ ಗೊತ್ತು ಆದರೆ ನಾವು ಅವರ ಹೆಸರು ಹೇಳಲ್ಲ. ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಬರುವ ಎಲ್ಲಾ ಚುನಾವಣೆಯಲ್ಲಿ ಸೋಲುತ್ತದೆ.ಸೋಮಣ್ಣ ನನ್ನ ಜೊತೆಗೆ ಮಾತನಾಡಿದ್ದಾರೆ. ಅಧಿವೇಶನ ಮುಗಿದ ಬಿಳಿಕ ನಾನು ಕುಳಿತು ಮಾತನಾಡುತ್ತೇನೆ. ಏನೇ ಸಮಸ್ಯೆ ಇದ್ದರು ಅದನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಟಿಪ್ಪು ಜಯಂತಿ ಆಚರಣೆಗೆ ಬೇಡಿಕೆ ವಿಚಾರದ ಬಗ್ಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಈಗಾಗಲೇ ಟಿಪ್ಪು, ಔರಂಗಜೇಬ್ ಅಂತ ಮಾಡಿ ಕಾಂಗ್ರೆಸ್ ಸೋತ್ತಿದ್ದರು. ಏನೋ ಕೆಲವು ನಮ್ಮ ತಪ್ಪಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ತುಷ್ಠೀಕರಣ ರಾಜಕೀಯ ಜನ ಸಹಿಸುವುದಿಲ್ಲ. ಐದು ರಾಜ್ಯಗಳಲ್ಲಿ ಒಂದು ರಾಜ್ಯ ಬಿಟ್ಟು ಹೀನಾಯ ಸೋಲಿಗೆ ಕಾಂಗ್ರೆಸ್ ತುಷ್ಟಿಕರಣ ಇಬ್ಬಗೆಯ ನೀತಿ ಕಾರಣ. ಒಬ್ಬ ಮತಾಂದ ವ್ಯಕ್ತಿಯ ಹೆಸರು ಇತಿಹಾಸದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. ಒಬ್ಬ ದುಷ್ಟ ಹಿಂದು ವಿರೋಧಿ ಮತಾಂದನ‌ ಹೆಸರು ವಿಮಾನ‌ ನಿಲ್ದಾಣಕ್ಕೆ ಇಟ್ಟರೆ ಜನ ಅದಕ್ಕೆ ತಕ್ಕ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.

ಉಳ್ಳಾಗಡ್ಡಿಮಠ ಬೆಂಬಲಿಗರಿಂದ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಭರ್ಜರಿ ಸ್ವಾಗತ: ರಜತ್‌ಗೆ ಟಿಕೆಟ್ ನೀಡುವಂತೆ ಮನವಿ

‘ನಡ್ಡಾ ಅವರಿಗೆ ದಮ್ಮು-ತಾಕತ್ ಇದ್ದರೆ, ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ’

ರೈತರಿಗೆ ಗುಡ್ ನ್ಯೂಸ್: ಸಹಕಾರಿ ಸಾಲದ ಮೇಲಿನ ಬಡ್ಡಿ ಮನ್ನಾ

About The Author