Wednesday, July 2, 2025

Latest Posts

ಏಪ್ರಿಲ್-29ಕ್ಕೆ “ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ” ಸಿನಿಮಾ ರಿಲೀಸ್..!

- Advertisement -

ಮಾಸಾಂತ್ಯಕ್ಕೆ “ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ”..!

ಸ್ಯಾಂಡಲ್‌ವುಡ್‌ನ ಕ್ಯೂಟ್ ಜೋಡಿ  ದಿಗಂತ್ – ಐಂದ್ರಿತಾ ರೆ ನಾಯಕ, ನಾಯಕಿಯಾಗಿ ನಟಿಸಿರುವ ” ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ” ಚಿತ್ರ ಇದೇ ಏಪ್ರಿಲ್ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಕುರಿತಾದ ವಿಷಯ ತಿಳಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

ಚಿತ್ರದ ಟ್ರೇಲರ್ ಹಾಗೂ ಹಾಡು ಈಗಾಗಲೇ ಜನರ ಮನಸ್ಸು ಗೆದ್ದಿದೆ. ಸಿನಿಮಾ ಕೂಡ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ. ನಾವು ಹೆಚ್ಚು ಹೇಳುವುದೇನು ಇಲ್ಲ. ಇದೇ 29 ರಂದು ಚಿತ್ರ ತೆರೆಗೆ ಬರುತ್ತಿದೆ. ನೀವೆಲ್ಲಾ ನೋಡಿ ಹರಸಿ ಎಂದರು ನಿರ್ದೇಶಕ ವಿನಾಯಕ ಕೋಡ್ಸರ. ಈ ಕಥೆ ಕೇಳಿದೆ ಇಷ್ಟವಾಯಿತು, 10 ವರ್ಷಗಳ ನಂತರ ನಿರ್ಮಾಣ ಮಾಡಿದ್ದೇನೆ. ಸುಮಾರು 60ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತೇನೆ ಎಂದರು ನಿರ್ಮಾಪಕ ಸಿಲ್ಕ್ ಮಂಜು.

ಮಧ್ಯಮವರ್ಗದ ಜನರ ಬಳಿ ತಿಂಗಳ ಕೊನೆಗೆ ದುಡ್ಡು ಉಳಿದಿರುವಿದಿಲ್ಲ. ಈ ವಿಷಯವಿಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರವಿದು. ಮಲೆನಾಡ ಸುಂದರ ಪರಿಸರದಲ್ಲಿ ಚಿತ್ರೀಕರಣವಾಗಿದೆ. ಉತ್ತಮ ಕಥೆಯಿರುವ ಚಿತ್ರವನ್ನು ಜನ ಮೆಚ್ಚಿಕೊಳ್ಳುತ್ತಾರೆ ಎಂಬ ನಂಬಿಕೆಯಿದೆ. ಚಿತ್ರತಂಡದ ಪರಿಶ್ರಮ ಚೆನ್ನಾಗಿದೆ ಎಂದರು ನಾಯಕ ದಿಗಂತ್. ಬಹಳ ವರ್ಷಗಳ ನಂತರ ನಾನು ದಿಗಂತ್ ಒಟ್ಟಾಗಿ ಅಭಿನಯಿಸುತ್ತಿದ್ದೇವೆ. ಲಾಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತದ್ದೇನೆ. ಉತ್ತಮ ಸಂದೇಶವಿರುವ ಈ ಚಿತ್ರವನ್ನು ನೋಡಿ ಹರಸಿ ಎಂದರು ನಾಯಕಿ ಐಂದ್ರಿತಾ ರೆ.

ಸಾಕಷ್ಟು ಬಿಗ್ ಬಜೆಟ್ ಚಿತ್ರಗಳ ನಡುವೆ ಉತ್ತಮ ಕಥೆಯುಳ್ಳ ಚಿತ್ರಗಳನ್ನು ಕನ್ನಡಿಗರು ಕೈ ಹಿಡಿಯುತ್ತಾರೆ ಎಂಬ ಭರವಸೆಯಿದೆ. ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದರು ಕಾರ್ಯಕಾರಿ ನಿರ್ಮಾಪಕ ರವೀಂದ್ರ ಜೋಶಿ.ನಟಿ ರಜನಿ ರಾಘವನ್ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಅತಿಥಿಯಾಗಿ ಆಗಮಿಸಿದ್ದ ಲಹರಿ ವೇಲು ಚಿತ್ರತಂಡಕ್ಕೆ ಶುಭ ಹಾರೈಸಿದರು. ಪ್ರಜ್ವಲ್ ಪೈ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಂದಕಿಶೋರ್ ಅವರ ಛಾಯಾಗ್ರಹಣವಿದೆ.

ಕರ್ನಾಟಕ ನ್ಯೂಸ್

- Advertisement -

Latest Posts

Don't Miss