ಒಂದು ದೇಶ ಒಂದು ಚುನಾವಣೆಗೆ ಪ್ರತಿ ಪಕ್ಷಗಳ ಭಾರಿ ವಿರೋಧ…

ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನ ಇಂದು ಆರಂಭಗೊಂಡಿದ್ದು, ಒಂದು ದೇಶ ಒಂದು ಚುನಾವಣೆ ವಿಷಯದ ಚರ್ಚೆಗೆ ಪ್ರತಿಪಕ್ಷದ ನಾಯಕರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಇಂದು ಮೊದಲ ದಿನದ ಅಧಿವೇಶನದ ಸಭೆಯಲ್ಲಿ ಸ್ಪೀಕರ್ ಕಾಗೇರಿಯವರು ಒಂದು ದೇಶ ಒಂದು ಚುನಾವಣೆ ಬಗ್ಗೆ ಪ್ರಸ್ತಾಪಿಸಿದ್ದು, ಇದಕ್ಕೆ ವಿರೋಧ ಪಕ್ಷದ ನಾಯಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ದೇಶ ಒಂದು ಚುನಾವಣೆ ಯೇಚನೆ ಅವಾಸ್ತವಿಕ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕೆಪಿಪಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಂದು ದೇಶ ಒಂದು ಚುನವಣೆ ಚರ್ಚೆಗೆ ಯಾರು ಅವಕಾಶ ಕೊಟ್ಟಿದ್ದು? ಕೇಂದ್ರ ಸರ್ಕಾರ ಏನಾದರೂ ಇದನ್ನ ಮಾಡಿ ಎಂದು ಹೇಳಿದ್ದಾರಾ, ಎಂದು ಮುಖ್ಯಮಂತ್ರಿಗಳಿಗೆ ಪ್ರಶ್ನಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಏನೇನು ಸಮಸ್ಯೆಯಿದೆ. ಈ ಸಮಸ್ಯೆಗಳ ಬಗ್ಗೆ ಯಾಕೆ ಚರ್ಚೆ ಮಾಡಬಾರದು, ಬಿಜೆಪಿರವರು ದುಡ್ಡು ಕೊಟ್ಟು ಶಾಸಕರನ್ನು ಖರೀದಿ ಮಾಡಿದ್ದಾರೆ. ಇವರಿಗೆ ಚುನಾವಣೆ ಬಗ್ಗೆ ಮಾತನಾಡಲು ಯಾವ ಮೌಲ್ಯವಿದೆ, ಈ ವಿಷಯ ಯಾರ ಒತ್ತಡದ ಮೇಲೆ ತಂದಿದ್ದಾರೆ. ಇದರ ಬಗ್ಗೆ ನಮ್ಮ ಪಕ್ಷದಲ್ಲಿ ಚರ್ಚೆ ಮಾಡಿದ್ದೇವೆ ಈ  ಚುನಾವಣೆ ನೀತಿ ಬಗ್ಗೆ ನಮ್ಮ ವಿರೋಧವಿದೆ ಅಕ್ರೋಶ ವ್ಯಕ್ತಪಡಿಸಿದ್ದಾರೆ .

ಇನ್ನು ಈ ನಡುವೆ ಭದ್ರವತಿ ಶಾಸಕ ಸಂಗಮೇಶ್ ಅವರು ಸದನದ ಬಾವಿಯಲ್ಲಿ ಶರ್ಟ್ ಬಿಚ್ಚಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು, ಇದೇ ವೇಳೆ ಸದನ ಸಭಾಪತಿ ಕಾಗೇರಿಯವರು ಶಾಸಕ ಸಂಗಮೇಶ್ ಅವರ ವರ್ತನೆಗೆ ವಿರೋಧ ವ್ಯಕ್ತಪಡಿಸಿ, ಸದನದ ಗೌರವನ್ನು ಕಾಪಾಡುವಂತೆ ಮನವಿ ಮಾಡಿಕೊಂಡರು. ಸದನದಲ್ಲಿ ಗೌರವದಿಂದ ನಡೆದುಕೊಳ್ಳಿ, ನಿಮ್ಮ ಮತದಾರರಿಗೆ ನೀವು ಅಗೌರವ ತೋರಿಸುತ್ತಿದ್ದೀರಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.

About The Author