ಚಿಕ್ಕಬಳ್ಳಾಪುರ: ಡಿಸೆಂಬರ್ 10 ರಂದು ವಿಧಾನಪರಿಷತ್ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅದಕ್ಕಾಗಿ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸಿದರೂ ಕಷ್ಟ ಬಿಟ್ಟರೂ ಕಷ್ಟ. ಏನೇ ಮಾಡಿದ್ರೂ ಬಿಜೆಪಿ ಜತೆ ಶಾಮೀಲಾಗಿದ್ದಾರೆ ಅಂತಾರೆ. ನಮ್ಮಿಂದಲೇ ಬೆಳೆದು ಹೋದ ಕೆಲವರು ಟೀಕೆ ಮಾಡುತ್ತಾರೆ. ಕೆಲವು ಜಿಲ್ಲೆಗಳಲ್ಲಿ 2 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 2 ಸದಸ್ಯ ಸ್ಥಾನಗಳಲ್ಲಿ ಒಂದು ಅಭ್ಯರ್ಥಿ ಏಕೆ ಹಾಕಿದ್ದಾರೆ. ಒಂದೊಂದೇ ಅಭ್ಯರ್ಥಿ ಹಾಕುವುದರ ಹಿಂದೆ ಒಳಒಪ್ಪಂದ ಇದೆಯಾ? ಇದರಲ್ಲಿ ಬಿಜೆಪಿ, ಕಾಂಗ್ರೆಸ್ ಒಳ ಒಪ್ಪಂದ ಇದೆಯಾ? ಎಂದು ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ನಾವು ಯಾರ ಜೊತೆ ಒಳ ಒಪ್ಪಂದ ಮಾಡಿಕೊಂಡಿಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಣೆ ಆಗಿದೆ. ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡರೇ ಮುಂದಿನ ಜೆಡಿಎಸ್ ಅಭ್ಯರ್ಥಿ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
ಮಳೆ ಹಾನಿ ಪರಿಹಾರ ನೀಡಲು ಇನ್ನೂ ಎಷ್ಟುದಿನ ಬೇಕು. ಪರಿಹಾರ ನೀಡಲು ಸರ್ಕಾರಕ್ಕೆ ಎಷ್ಟು ದಿನಗಳು ಬೇಕು. ಮಳೆ ಹಾನಿ ವಿಚಾರದಲ್ಲಿ ಹೇಳಿಕೆಗಳು, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕೃಷಿ ಸಚಿವರ ಹೇಳಿಕೆ ಗೊಂದಲಮಯವಾಗಿದೆ. ಸಿಎಂ, ಸಚಿವರದ್ದು ಒಂದೊಂದು ಅಂಕಿ ಸಂಖ್ಯೆ ಇದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ರೈತರ ಮಕ್ಕಳ ಶಿಷ್ಯವೇತನ ವಿಚಾರದಲ್ಲಿ ಸರ್ಕಾರ ನುಡಿದಂತೆ ನಡೆದಿಲ್ಲ ಎಂದು ಆರೋಪಿಸಿದ್ದಾರೆ.
ಯಡಿಯೂರಪ್ಪನವರು ನಮ್ಮ ಬೆಂಬಲವನ್ನ ಕೋರಿದ್ರು. ಕೆಲವು ಚುನಾವಣೆಯಲ್ಲಿ ನೇರವಾಗಿ ಬೆಂಬಲ ಕೋರಿದ್ದರು. ಇವತ್ತು ಬಿಎಸ್ವೈರನ್ನ ಅಧಿಕಾರದಿಂದ ಇಳಿಸಲಾಗಿದೆ. ಬಿಜೆಪಿ ಜೊತೆಗೆ ಕಾಂಗ್ರೆಸ್ನವರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ನ ಮಹಾನ್ ನಾಯಕರಿಂದ ಒಳ ಒಪ್ಪಂದ ಆಗಿದೆ. ಆದರೆ ಕಾಂಗ್ರೆಸ್ ನಮ್ಮ ವಿರುದ್ಧ ಆರೋಪ ಮಾಡುತ್ತಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯದಲ್ಲಿ ಎಸಿಬಿ ದಾಳಿ ಕುರಿತು ಹೆಚ್ಡಿಕೆ ಪ್ರತಿಕ್ರಿಯೆ ನೀಡಿದ್ದಾರೆ. ಕೃಷಿ ಇಲಾಖೆ ಜಂಟಿ ನಿರ್ದೇಶಕನ ಮನೆಯಲ್ಲಿ 9 ಕೆಜಿ ಚಿನ್ನ ಪತ್ತೆ ಆಗಿದೆ. ಆ ಅಧಿಕಾರಿ ಬೆಳೆ ಬದಲು ಚಿನ್ನವನ್ನೇ ಬೆಳೆದನಾ? ರಾಜ್ಯದಲ್ಲಿ ಪರಿಸ್ಥಿತಿ ಬೇರೆ ಆಗಿದೆ. 2 ರೂಪಾಯಿ 3 ರೂಪಾಯಿ ಲಂಚ ಪಡೆದವರಿಗೆ ಶಿಕ್ಷೆ ಆಗಿದೆ. ಕೋಟ್ಯಾಂತರ ರೂ. ಲಂಚ ಹೊಡೆದವರು ಆರಾಮಾಗಿದ್ದಾರೆ ಎಂದು ಟೀಕಿಸಿದ್ದಾರೆ.




